ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.