ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟು
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.