1
|
ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು |
2
|
ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು. |
3
|
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ |
4
|
ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು. |
5
|
ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು. |
6
|
ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು |
7
|
ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು. |
8
|
ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು. |
9
|
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು. |
10
|
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. |
11
|
ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು. |
12
|
ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು. |
13
|
ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು. |
14
|
ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು. |
15
|
ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು? |
16
|
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು. |
17
|
ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? |
18
|
ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು. |
19
|
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು. |
20
|
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು. |
21
|
ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು. |
22
|
ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು. |
23
|
ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ? |
24
|
ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು. |
25
|
ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು. |
26
|
ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು. |
27
|
ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ-- |
28
|
ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು. |
29
|
ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. |
30
|
ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. |
31
|
ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. |
32
|
ಕಡೇ ದಾಗಿ ಆ ಹೆಂಗಸು ಸಹ ಸತ್ತಳು. |
33
|
ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು. |
34
|
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ. |
35
|
ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ. |
36
|
ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ. |
37
|
ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು. |
38
|
ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು. |
39
|
ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು. |
40
|
ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ. |
41
|
ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ? |
42
|
ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ-- |
43
|
ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು. |
44
|
ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು. |
45
|
ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ-- |
46
|
ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; |
47
|
ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು. |
Luke 20:1 Telugu Language Bible Words basic statistical display
COMING SOON ...