ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ
ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ. ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.