ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.