ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.
ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.