ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.