ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.