1
|
ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. |
2
|
ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು. |
3
|
ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು. |
4
|
ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. |
5
|
ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ |
6
|
ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. |
7
|
ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. |
8
|
ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. |
9
|
ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. |
10
|
ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. |
11
|
ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. |
12
|
ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು. |
13
|
ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು. |
14
|
ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ. |
15
|
ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. |
16
|
ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ. |
17
|
ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ. |
18
|
ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. |
19
|
ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ. |
20
|
ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ. |
21
|
ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ. |
Psalms 145:4 Telugu Language Bible Words basic statistical display
COMING SOON ...