ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.