ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ