ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.